We Believe JesusFé, Esperança e Nova Vida

ಅರಣ್ಯ 24

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಅರಣ್ಯ 23 ಅರಣ್ಯ ಅರಣ್ಯ 25 →

1ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.

2ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,

3ಹೀಗೆ ಪ್ರವಾದಿಸಿದನು,

4ದೇವರ ಮಾತುಗಳನ್ನು ಕೇಳುವವನಾಗಿಯೂ,

5ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ,

6ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ.

7ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ,

8ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು.

9ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ,

10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.

11ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.

12ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,

13‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’

14ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.

15ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು,

16ದೇವರ ಮಾತುಗಳನ್ನು ಕೇಳುವವನೂ,

17ನಾನು ಅವನನ್ನು ನೋಡುವೆನು, ಈಗಲ್ಲ.

18ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ,

19ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು,

20ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,

21ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,

22ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ?

23ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ,

24ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು

25ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.

← ಅರಣ್ಯ 23 ಅರಣ್ಯ ಅರಣ್ಯ 25 →

ಅರಣ್ಯ 24 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ