1ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
2“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
3ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,
4“ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
5ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
6ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.
7ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
8ಪಲ್ಲೂವಿನ ಮಗನು ಎಲೀಯಾಬ್.
9ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
10ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
11ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
12ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ:
13ಜೆರಹನ ವಂಶಸ್ಥರಾದ ಜೆರಹಿಯರು,
14ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
15ಗಾದ್ ಕುಲದ ಕುಟುಂಬಗಳು ಯಾವುವೆಂದರೆ:
16ಒಜ್ನೀಯ ವಂಶಸ್ಥರಾದ ಒಜ್ನೀಯರು,
17ಅರೋದನ ವಂಶಸ್ಥರಾದ ಅರೋದ್ಯರು,
18ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
19ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
20ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ:
21ಪೆರೆಚನಿಂದುಂಟಾದ ಕುಟುಂಬಗಳು:
22ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
23ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ:
24ಯಾಶೂಬನ ವಂಶಸ್ಥರಾದ ಯಾಶೂಬ್ಯರು,
25ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
26ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ:
27ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
28ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
29ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ:
30ಗಿಲ್ಯಾದನ ವಂಶದವರು ಯಾರೆಂದರೆ:
31ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು,
32ಶೆಮೀದಾಯನ ವಂಶಸ್ಥರಾದ ಶೆಮೀದಾಯರು,
33ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
34ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
35ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
36ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
37ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
38ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ:
39ಶೂಫಾಮನ ವಂಶಸ್ಥರಾದ ಶೂಫಾಮ್ಯರು,
40ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
41ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
42ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
43ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
44ಆಶೇರ್ ಕುಲದ ಕುಟುಂಬಗಳು:
45ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು:
46ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.
47ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
48ನಫ್ತಾಲಿ ಕುಲದ ಕುಟುಂಬಗಳು:
49ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.
50ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
51ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
52ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
53“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
54ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
55ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
56ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
57ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು:
58ಲೇವಿ ಕುಲದವರ ಕುಟುಂಬಗಳು:
59ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
60ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
61ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
62ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
63ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.
64ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
65ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.