We Believe JesusFé, Esperança e Nova Vida

ಜೆಕ 10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜೆಕ 9 ಜೆಕ ಜೆಕ 11 →

1ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ;

2ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು,

3ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು10:3 ಹೋತಗಳನ್ನುನಾಯಕರನ್ನು. ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

4ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.

5ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

6ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.

7ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.

8ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.

9ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.

10ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.

11ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.

12ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.

← ಜೆಕ 9 ಜೆಕ ಜೆಕ 11 →

ಜೆಕ 10 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ