1ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
2ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು.
3ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,
4“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು,
5ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ,
6ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ;
7ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
8ನಿಮ್ಮನ್ನು ತಾಕುವವನು ನನ್ನ2:8 ನನ್ನ ಅಥವಾ ಆತನ. ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ.
9“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ.
10ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ!
11ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು;
12ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು,
13ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.