We Believe JesusFé, Esperança e Nova Vida

ಜೆಕ 6

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜೆಕ 5 ಜೆಕ ಜೆಕ 7 →

1ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.

2ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು;

3ಮೂರನೆಯ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೆಯ ರಥಕ್ಕೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.

4ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, “ನನ್ನ ಸ್ವಾಮೀ ಇದೇನು?” ಎಂದೆನು.

5ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು6:5 ಗಾಳಿಗಳು ಆತ್ಮ.; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.

6ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು.

7ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.

8ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.

9ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

10ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು6:10 ಬಂಗಾರಗಳನ್ನು ಉಡುಗೊರೆಗಳನ್ನು. ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ,

11ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,

12ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ,

13ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು.

14“‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ6:14 ಯೋಷೀಯ ಅಥವಾ ಹೇನ್. ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.

15ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”

← ಜೆಕ 5 ಜೆಕ ಜೆಕ 7 →

ಜೆಕ 6 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ