1ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು,
2ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು,
3ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ,
4ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ,
5ಸತ್ಯಸಾಕ್ಷಿಯು ಸುಳ್ಳಾಡನು,
6ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು,
7ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
8ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ,
9ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು,
10ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು,
11ದುಷ್ಟರ ಮನೆಗೆ ನಾಶನ,
12ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು.
13ನಗುವವನಿಗೂ ಮನೋವ್ಯಥೆಯುಂಟು,
14ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು,
15ಮೂಢನು ಯಾವ ಮಾತನ್ನಾದರೂ ನಂಬುವನು,
16ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು,
17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು,
18ಮೂರ್ಖರಿಗೆ ಮೂರ್ಖತನವೇ ಸ್ವತ್ತು,
19ಕೆಟ್ಟವರು ಒಳ್ಳೆಯವರಿಗೆ ಬಾಗುವರು,
20ಬಡವನು ನೆರೆಯವನಿಗೂ ಅಸಹ್ಯ,
21ನೆರೆಯವನನ್ನು ತಿರಸ್ಕರಿಸುವವನು ದೋಷಿ,
22ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ,
23ಶ್ರಮೆಯಿಂದ ಸಮೃದ್ಧಿ,
24ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು,
25ಸತ್ಯಸಾಕ್ಷಿಯು ಪ್ರಾಣರಕ್ಷಕ,
26ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ,
27ಯೆಹೋವನ ಭಯ ಜೀವದ ಬುಗ್ಗೆ,
28ಪ್ರಜೆಗಳ ವೃದ್ಧಿ ರಾಜನ ಮಹಿಮೆ,
29ದೀರ್ಘಶಾಂತನು ಕೇವಲ ಬುದ್ಧಿವಂತನು,
30ಶಾಂತಗುಣವು ದೇಹಕ್ಕೆ ಜೀವಾಧಾರವು,
31ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು,
32ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು,
33ವಿವೇಕಿಯ ಹೃದಯ ಜ್ಞಾನಾಶ್ರಯ,
34ಪ್ರಜೆಗೆ ಧರ್ಮವು ಉನ್ನತಿ,
35ಜಾಣನಾದ ಸೇವಕನಿಗೆ ರಾಜನ ಕೃಪೆ,