1ಕಂದಾ, ನನ್ನ ಉಪದೇಶವನ್ನು ಮರೆಯಬೇಡ,
2ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ,
3ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು,
4ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ,
5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ
6ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;
7ನೀನೇ ಬುದ್ಧಿವಂತನು ಎಂದೆಣಿಸದೆ,
8ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ,
9ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ
10ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು,
11ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ.
12ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ
13ಜ್ಞಾನವನ್ನು ಪಡೆಯುವವನು ಧನ್ಯನು,
14ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ,
15ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು,
16ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ,
17ಆಕೆಯ ದಾರಿಗಳು ಸುಖಕರವಾಗಿವೆ,
18ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ.
19ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ,
20ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ,
21ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ,
22ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
23ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
24ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ,
25ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ
26ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು,
27ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ
28ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ,
29ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು,
30ನಿನಗೆ ಅಪಕಾರ ಮಾಡದವನ ಸಂಗಡ
31ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು,
32ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು,
33ಯೆಹೋವನು ದುಷ್ಟನ ಮನೆಯನ್ನು ಶಪಿಸುವನು,
34ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು.
35ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು,