1ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ,
2ನಾನು ನಿಮಗೆ ಸುಬೋಧೆಯನ್ನು ಮಾಡುವೆನು,
3ನಾನೂ ನನ್ನ ತಂದೆಗೆ ಅಧೀನನಾದ ಮಗನೂ,
4ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು,
5ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ,
6ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು,
7ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ,
8ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು,
9ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು,
10ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು,
11ನಾನು ಜ್ಞಾನಮಾರ್ಗವನ್ನು ಉಪದೇಶಿಸಿ,
12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ,
13ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ,
14ದುಷ್ಟರ ಮಾರ್ಗದಲ್ಲಿ ಸೇರಬೇಡ,
15ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ,
16ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು;
17ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.
18ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ
19ದುಷ್ಟರ ಮಾರ್ಗವೋ ಕತ್ತಲಿನಂತಿದೆ;
20ಕಂದಾ, ನನ್ನ ಮಾತುಗಳನ್ನು ಆಲಿಸು,
21ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ,
22ಅವುಗಳನ್ನು ಹೊಂದುವವರಿಗೆ ಅವು ಜೀವವು,
23ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ,
24ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು,
25ನೆಟ್ಟಗೆ ದೃಷ್ಟಿಸು,
26ನೀನು ನಡೆಯುವ ದಾರಿಯನ್ನು ಸಮಮಾಡು,
27ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ,