1ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ,
2ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ,
3ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು,
4ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ,
5ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ,
6ಸೋಮಾರಿಯೇ, ಇರುವೆಯ ಹತ್ತಿರ ಹೋಗಿ,
7ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ,
8ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು,
9ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ?
10“ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ,
11ಬಡತನವು ದಾರಿಗಳ್ಳನ ಹಾಗೂ
12ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು,
13ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ,
14ಅವನ ಮನಸ್ಸಿನಲ್ಲಿರುವುದು ದ್ರೋಹವೇ;
15ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು,
16ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ,
17ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ,
18ದುರಾಲೋಚನೆಗಳನ್ನು ಕಲ್ಪಿಸುವ ಹೃದಯ,
19ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು
20ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,
21ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ,
22ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು,
23ಆಜ್ಞೆಯೇ ದೀಪ, ಉಪದೇಶವೇ ಬೆಳಕು,
24ಅದು ಕೆಟ್ಟ ಸ್ತ್ರೀಯಿಂದಲೂ,
25ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ,
26ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು,
27ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ
28ಧಗಧಗಿಸುವ ಕೆಂಡದ ಮೇಲೆ ನಡೆದರೆ
29ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು,
30ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ
31ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು,
32ವ್ಯಭಿಚಾರಿಯೋ ಕೇವಲ ಬುದ್ಧಿಹೀನನು,
33ಅವನಿಗೆ ಗಾಯವೂ, ಅವಮಾನವೂ ಆಗುವವು,
34ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ,
35ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.