1ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ,
2ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು,
3ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ,
4ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು,
5ಅವು ಜಾರಳಿಂದ ಮತ್ತು ಸವಿಮಾತನಾಡುವ
6ನಾನು ನನ್ನ ಮನೆಯ ಕಿಟಕಿಯ
7ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು.
8ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,
9ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ,
10ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ
11ಇವಳು ಕೂಗಾಟದವಳು, ಹಟಮಾರಿ,
12ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು,
13ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,
14“ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ,
15ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು,
16ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ,
17ಹಾಸಿಗೆಯ ಮೇಲೆ ರಕ್ತಬೋಳ, ಅಗುರು,
18ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ,
19ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.
20ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ,
21ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ,
22ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ,
23ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ,
24ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ,
25ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ,
26ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು,
27ಅವಳ ಮನೆಯು ಪಾತಾಳದ ದಾರಿ,