We Believe JesusFé, Esperança e Nova Vida

ರೋಮಾ 10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ರೋಮಾ 9 ರೋಮಾ ರೋಮಾ 11 →

1ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

210:2 ಅ. ಕೃ. 21:20ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

310:3 ರೋಮಾ. 1:17ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

4ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

5ಧರ್ಮಶಾಸ್ತ್ರದ ನೀತಿಯನುಸಾರ, 10:5 ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12“ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.

6ಆದರೆ 10:6 ರೋಮಾ. 9:30ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. 10:6 ಧರ್ಮೋ 30:12-14“‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’

7ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ.

8“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

9ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು 10:9 ಮತ್ತಾ 10:32; ಲೂಕ 12:8ಬಾಯಿಂದ ಅರಿಕೆಮಾಡಿಕೊಂಡು 10:9 ಅ. ಕೃ. 2:24; 1 ಪೇತ್ರ 1:21ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.

10ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.

1110:11 ಯೆಶಾ 28:16; ರೋಮಾ. 9:33“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.

12ಈ ವಿಷಯದಲ್ಲಿ 10:12 ರೋಮಾ. 3:22,29ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. 10:12 ಅ. ಕೃ. 10:36ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.

13ಆದ್ದರಿಂದ10:13 ಯೋವೇ. 2:32; ಅ. ಕೃ. 2:21 ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.

14ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?

15ಇದಕ್ಕೆ ಸರಿಯಾಗಿ 10:15 ಯೆಶಾ 52:7; ನಹೂ. 1:15“ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.

1610:16 ಇಬ್ರಿ. 4:2ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, 10:16 ಯೆಶಾ 53:1; ಯೋಹಾ 12:38“ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.

17ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.

18ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. 10:18 ಕೀರ್ತ 19:4“ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”

19ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, 10:19 ಧರ್ಮೋ 32:21“ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.

20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, 10:20 ಯೆಶಾ 65:1“ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.

21ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, 10:21 ಯೆಶಾ 65:2“ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.

← ರೋಮಾ 9 ರೋಮಾ ರೋಮಾ 11 →

ರೋಮಾ 10 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ