We Believe JesusFé, Esperança e Nova Vida

ರೋಮಾ 12

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ರೋಮಾ 11 ರೋಮಾ ರೋಮಾ 13 →

1ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, 12:1 ರೋಮಾ. 6:13,16,19; 1 ಕೊರಿ 6:20ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ 12:1 ಪವಿತ್ರವಾಗಿಯೂಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

212:2 1 ಪೇತ್ರ 1:14; 1 ಯೋಹಾ 2:15ಇಹಲೋಕದ ನಡವಳಿಕೆಯನ್ನು ಅನುಸರಿಸದೆ 12:2 ತೀತ 3:5; ಎಫೆ 4:23; ಕೊಲೊ 3:10ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ 12:2 1 ಥೆಸ. 4:3ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

3ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ 12:3 ರೋಮಾ. 11:20; 12:16ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ 12:3 1 ಕೊರಿ 7:17; ಎಫೆ 4:7ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

4ಯಾಕೆಂದರೆ 12:4 1 ಕೊರಿ 12:12-14; ಎಫೆ 4:4,16ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ

5ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ 12:5 1 ಕೊರಿ 12:20 ಎಫೆ 4:4,12ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.

612:6 1 ಕೊರಿ 12:4,7-11; 7:7; 1 ಪೇತ್ರ 4:10,11ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. 12:6 1 ಕೊರಿ 12:10ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.

712:7 ಅ. ಕೃ. 6:1ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.

8ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. 12:8 2 ಕೊರಿ 8:2; 9:7,11,13ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. 12:8 1 ತಿಮೊ. 5:17ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.

9ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. 12:9 ಕೀರ್ತ 97:10; ಅಮೋ. 5:15; 1 ಥೆಸ. 5:21,22ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.

1012:10 ಇಬ್ರಿ. 13:1ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. 12:10 ರೋಮಾ. 13:7; ಫಿಲಿ. 2:3ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.

11ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ 12:11 ಅ. ಕೃ. 18:25ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.

1212:12 ರೋಮಾ. 5:2ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.

13ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.

1412:14 ಮತ್ತಾ 5:44; 1 ಪೇತ್ರ 3:9ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.

1512:15 1 ಕೊರಿ 12:26ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

1612:16 ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ 12:16 ರೋಮಾ. 12:3; ಕೀರ್ತ 131:1; ಯೆರೆ 45:5ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. 12:16 ರೋಮಾ. 11:25ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

17ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. 12:17 2 ಕೊರಿ 8:21ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.

18ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ 12:18 ಮಾರ್ಕ 9:50ಎಲ್ಲರ ಸಂಗಡ ಸಮಾಧಾನದಿಂದಿರಿ.

19ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ 12:19 ಧರ್ಮೋ 32:35; ಇಬ್ರಿ. 10:30“‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.

20ಹಾಗಾದರೆ 12:20 ಜ್ಞಾ. 25:21,22; ಲೂಕ 6:27“ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”12:20 ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ.

21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.

← ರೋಮಾ 11 ರೋಮಾ ರೋಮಾ 13 →

ರೋಮಾ 12 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ