We Believe JesusFé, Esperança e Nova Vida

ರೋಮಾ 9

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ರೋಮಾ 8 ರೋಮಾ ರೋಮಾ 10 →

1ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.

2ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.

3ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.

4ಅವರು ಇಸ್ರಾಯೇಲಿನ ವಂಶದವರು. 9:4 ವಿಮೋ 4:22, ರೋಮಾ. 8:15ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; 9:4 ಆದಿ 17:2, ಧರ್ಮೋ 29:14, ಗಲಾ. 4:24ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ 9:4 ಧರ್ಮೋ 4:14ಅವರಿಗೆ ಧರ್ಮಶಾಸ್ತ್ರವು, 9:4 ಇಬ್ರಿ. 9:1ದೇವಾಲಯದಲ್ಲಿ ನಡೆಯುವ ಆರಾಧನೆಯೂ, 9:4 ಎಫೆ 2:12, ಅ. ಕೃ. 13:32ವಾಗ್ದಾನಗಳೂ ಕೊಡಲ್ಪಟ್ಟವು.

5ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು 9:5 ರೋಮಾ. 1:25, 2 ಕೊರಿ 11:31, ಎಫೆ 4:6, ಇಬ್ರಿ. 1:8ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

6ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.

7ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ 9:7 ಆದಿ 21:12, ಇಬ್ರಿ 11:18“ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.

8ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. 9:8 ಗಲಾ. 4:23, 28ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.

99:9 ಆದಿ 18:10; 14:17,21“ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.

10ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.

11ಇದಕ್ಕನುಸಾರವಾಗಿ 9:13 ಮಲಾ. 1:2-3“ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು 9:13 ಅಥವಾ ಅಲಕ್ಷ್ಯ ಮಾಡಿದೆನು, ಮತ್ತಾ 6:24, ಲೂಕ 25:23, ಯೋಹಾ 12:25ದ್ವೇಷಿಸಿದನು” ಎಂದು ಬರೆದದೆ.

12ಹಾಗಾದರೆ ಏನು ಹೇಳೋಣ? 9:14 ಧರ್ಮೋ 32:4, 2 ಪೂರ್ವ 19:7, ಯೋಬ. 8:3, 34:10, ಕೀರ್ತ 92:15ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.

139:15 ವಿಮೋ 33:19“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.

14ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.

15ದೇವರು ಫರೋಹನನನ್ನು ಕುರಿತು 9:17 ವಿಮೋ 9:16“ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.

16ದೇವರು 9:18 ವಿಮೋ 4:21, 9:12, 11:10, 14:4, ಧರ್ಮೋ 2:30ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.

17“ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.

18ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? 9:20 ಯೆಶಾ 29:16, 45:9ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?

199:21 2 ತಿಮೊ. 2:20ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ 9:21 ಯೆಶಾ 64:8, ಯೆರ. 18:6ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

20ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.

21ಮತ್ತು 9:23 ರೋಮಾ. 8:29-30ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ 9:23 ಎಫೆ 3:17ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.

22ಆತನು ಕರುಣಿಸಿದ ನಮ್ಮನ್ನು 9:24 ರೋಮಾ. 3:29ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ 9:24 ರೋಮಾ. 8:25ಕರೆದನು.

23ಆ ವಚನವೇನಂದರೆ,

24ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ 9:26 ರೋಮಾ. 8:14, ಮತ್ತಾ 16:16ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.

25ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: 9:27 ಯೆಶಾ 10:22,23“ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ 9:27 ರೋಮಾ. 11:5ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.

26ಅದೇ ಅಭಿಪ್ರಾಯದಿಂದ ಯೆಶಾಯನು 9:28 ಯೆಶಾ 1:9ಮತ್ತೊಂದು ವಚನದಲ್ಲಿ,

279:29 ಯಾಕೋಬ. 5:4“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ

28ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ 9:30 ರೋಮಾ. 10:20ಅನ್ಯಜನರಿಗೆ ನೀತಿಯು ಅಂದರೆ 9:30 ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7ನಂಬಿಕೆಯಿಂದುಂಟಾದ ನೀತಿಯು ದೊರಕಿತು.

29ಆದರೆ ನೀತಿಯನ್ನು ಹಿಂಬಾಲಿಸಿದ್ದ 9:31 ರೋಮಾ. 10:2-3, 11:7, ಗಲಾ. 5:4ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.

30ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,

319:33 1 ಪೇತ್ರ. 2:8ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ,

← ರೋಮಾ 8 ರೋಮಾ ರೋಮಾ 10 →

ರೋಮಾ 9 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ