We Believe JesusFé, Esperança e Nova Vida

ಕೊಲೊ 2

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೊಲೊ 1 ಕೊಲೊ ಕೊಲೊ 3 →

1ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,

2ಅವರ ಹೃದಯಗಳು ಉತ್ತೇಜನಗೊಂಡು, 2:2 ಕೊಲೊ 3:14ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು 2:2 ಕೊಲೊ 1:29; 4:12ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.

32:3 ಜ್ಞಾ. 2:1-5; ಯೆಶಾ 11:2, 45:3; 1 ಕೊರಿ 1:24, 30, 2:6-7 ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.

4ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.

52:5 1 ಕೊರಿ 5:3ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು 2:5 1 ಕೊರಿ 14:40ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು 2:5 1 ಪೇತ್ರ 5:9ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

6ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.

72:7 ಎಫೆ 3:18ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು 2:7 ಎಫೆ 4:21ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.

8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು 2:8 ಮತ್ತಾ 15:2ಮನುಷ್ಯರ ಸಂಪ್ರದಾಯಗಳಿಗೆ ಮತ್ತು 2:8 ಕೊಲೊ 2:20; ಗಲಾ. 4:3ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

9ದೇವರ ಸರ್ವಸಂಪೂರ್ಣತೆಯು 2:9 ಕೊಲೊ 1:19; ಯೋಹಾ 1:14ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,

102:10 ಎಫೆ 1:21-22ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ 2:10 ಎಫೆ 3:19ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

11ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ 2:11 ಕೊಲೊ 3:9ಪಾಪಸ್ವಭಾವವನ್ನು ತೆಗೆದುಹಾಕುವುದೇ.

122:12 ರೋಮಾ. 6:3-4ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು 2:12 ಅ. ಕೃ. 2:24; 1 ಕೊರಿ 6:14; ಎಫೆ 1:19ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.

13ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ 2:13 ಎಫೆ 2:1ಸತ್ತವರಾಗಿದ್ದ ನಿಮ್ಮನ್ನು 2:13 ಎಫೆ 2:5ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

142:14 ರೋಮಾ. 7:4ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.

15ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ 2:15 ನಿರಾಯುಧರಾಗಿನಿರಾಯುಧರನ್ನಾಗಿ ಮಾಡಿ, ತನ್ನ 2:15 ಕ್ರಿಸ್ತನಲ್ಲಿಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.

16ಹೀಗಿರುವುದರಿಂದ, 2:16 ರೋಮಾ. 14:17; ಇಬ್ರಿ. 9:10; ಯಾಜ 11:2ಅನ್ನಪಾನಗಳ ವಿಷಯದಲ್ಲಿಯೂ ಅಥವಾ 2:16 ಯಾಜ 3:2; ರೋಮಾ. 14:5; ಮಾರ್ಕ 2:28ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ 2:16 ರೋಮಾ. 14:3; 10, 13ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.

172:17 ಇಬ್ರಿ. 8:5; 10:1ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.

182:18 ವ. 23ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, 2:18 ಯೆಹೆ. 13:7ದರ್ಶನಗಳಾದವೆಂದು ಕೊಚ್ಚಿಕೊಂಡು, 2:18 ರೋಮಾ. 8:7ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ 2:18 1 ಕೊರಿ 9:24ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.

19ಇಂಥವನು 2:19 ಎಫೆ 4:15-16ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

20ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು 2:20 ರೋಮಾ. 6:4ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, 2:20 ಗಲಾ. 4:9ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,

21ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, 2:23 ವ. 18ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ 2:23 1 ತಿಮೊ. 4:8ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

← ಕೊಲೊ 1 ಕೊಲೊ ಕೊಲೊ 3 →

ಕೊಲೊ 2 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ