We Believe JesusFé, Esperança e Nova Vida

ಕೊಲೊ 4

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೊಲೊ 3 ಕೊಲೊ

1ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

3ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ 4:3 ಕೊಲೊ 4:18; ಎಫೆ 6:20; ಫಿಲಿ. 1:7ನಾನು ಸೆರೆಯಲ್ಲಿದ್ದೇನಲ್ಲಾ.

4ನಾನು ಆ 4:4 ರೋಮಾ. 16:25ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.

5ಸಮಯವನ್ನು ಸದುಪಯೋಗಿಸಿಕೊಂಡು 4:5 ಮಾರ್ಕ 4:11ಹೊರಗಿನವರೊಂದಿಗೆ 4:5 ಎಫೆ 5:15-17ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

6ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ 4:6 ಉಪ್ಪಾಗಿಯೂರುಚಿಕರವಾಗಿಯೂ ಇರಲಿ. 4:6 1 ಪೇತ್ರ 3:15ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

7ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.

8ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,

9ಅವನನ್ನು ನಂಬಿಗಸ್ತನು ಮತ್ತು4:9 ಫಿಲೆ. 16 ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ 4:9 ಫಿಲೆ. 10ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.

10ನನ್ನ ಜೊತೆ ಸೆರೆಯವನಾದ 4:10 ಅ. ಕೃ. 19:29; 20:4; 7:2; ಫಿಲೆ. 24ಅರಿಸ್ತಾರ್ಕನೂ ಮತ್ತು 4:10 ಅ. ಕೃ. 15:37-39ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. 4:10 ಅ. ಕೃ. 12:12ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.

11ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. 4:11 ಅ. ಕೃ. 11:2ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.

12ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ 4:12 ಕೊಲೊ 1:7; ಫಿಲೆ. 23ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು 4:12 ಮತ್ತಾ 5:48ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

13ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.

14ಪ್ರಿಯ ವೈದ್ಯನಾಗಿರುವ 4:14 2 ತಿಮೊ. 4:11; ಅ. ರು. 16:10ಲೂಕನು ಮತ್ತು 4:14 2 ತಿಮೊ. 4:10; ಫಿಲೆ. 24ದೇಮನು ನಿಮಗೆ ವಂದನೆ ಹೇಳುತ್ತಾರೆ.

15ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ 4:15 ರೋಮಾ. 16:5ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.

16ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.

174:17 ಫಿಲೆ. 2ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.

184:18 1 ಕೊರಿ 16:21ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. 4:18 ಫಿಲಿ. 1:7; ಕೊಲೊ 4:3; ಇಬ್ರಿ. 13:3ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. 4:18 1 ತಿಮೊ. 6:21; 2 ತಿಮೊ. 4:22; ತೀತ. 3:15; ಇಬ್ರಿ. 13:25ಕೃಪೆಯು ನಿಮ್ಮೊಂದಿಗಿರಲಿ.

← ಕೊಲೊ 3 ಕೊಲೊ

ಕೊಲೊ 4 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ