1ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ;
2ಆತನನ್ನು ಕೀರ್ತಿಸಿರಿ, ಭಜಿಸಿರಿ;
3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ;
4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ;
5ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ,
6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ,
7ಯೆಹೋವನೆಂಬಾತನೇ ನಮ್ಮ ದೇವರು;
8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ,
9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು;
10ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.
11ಅವರಲ್ಲಿ ಸ್ವಲ್ಪ ಜನರು
12ಆತನು, “ನಿಮಗೆ ಈ ದೇಶವನ್ನು ಕೊಡುವೆನು;
13ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,
14ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ.
15“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು,
16ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ,
17ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು;
18ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು;
19ಅವನು ತನ್ನ ಮಾತು ನೆರವೇರುವ ತನಕ
20ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು;
21ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ,
22ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ,
23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು;
24ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ,
25ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ,
26ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ,
27ಅವರು ಹಾಮನ ದೇಶದವರ ಮಧ್ಯದಲ್ಲಿ,
28ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು.
29ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.
30ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು;
31ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ,
32ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,
33ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ,
34ಆತನು ಆಜ್ಞಾಪಿಸಲು ಮಿಡತೆಗಳೂ,
35ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು,
36ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ,
37ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು;
38ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ,
39ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು,
40ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು;
41ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು,
42ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ,
43ತನ್ನ ಪ್ರಜೆಯು ಉಲ್ಲಾಸದಿಂದಲೂ,
44ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು;
45ಅವರು ತನ್ನ ವಿಧಿಗಳನ್ನು ಕೈಕೊಂಡು,