1ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.
2ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ.
3ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು,
4ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ;
5ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ;
6ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು;
7ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ;
8ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ;
9ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.
10ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು,
11ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ;
12ಅವನಿಗೆ ಯಾರೂ ಕೃಪೆತೋರಿಸದಿರಲಿ,
13ಅವನ ಸಂತತಿಯು ನಿರ್ಮೂಲವಾಗಲಿ;
14ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ;
15ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ.
16ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು,
17ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ!
18ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ,
19ಶಾಪವೇ ಅವನ ಹೊದಿಕೆಯಂತೆಯೂ,
20ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ
21ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ;
22ನಾನು ಬಡವನೂ, ದೀನನೂ ಆಗಿದ್ದೇನಲ್ಲಾ!
23ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ;
24ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು;
25ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ;
26ಯೆಹೋವನೇ, ನನ್ನ ದೇವರೇ, ಸಹಾಯಮಾಡು;
27ಆಗ ಅವರು ಇದು ನಿನ್ನ ಕೈಕೆಲಸವೆಂದೂ,
28ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ.
29ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ;
30ಯೆಹೋವನನ್ನು ಬಹಳವಾಗಿ ಕೊಂಡಾಡುವೆನು;
31ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು,