1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,
2ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ,
3ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ,
4ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು,
5ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ,
6ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ,
7ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ,
8ಸೂರ್ಯನು ಹಗಲನ್ನು ಆಳುತ್ತಾನೆ,
9ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ,
10ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು,
11ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು,
12ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು,
13ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು,
14ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು,
15ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು,
16ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು,
17ದೊಡ್ಡ ಅರಸರನ್ನು ಹೊಡೆದನು,
18ಶ್ರೇಷ್ಠ ರಾಜರನ್ನು ಸಂಹರಿಸಿದನು,
19ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು,
20ಬಾಷಾನಿನ ಅರಸನಾದ ಓಗನು ಇನ್ನೊಬ್ಬನು,
21ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು,
22ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು,
23ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು,
24ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು,
25ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ,
26ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ,