1ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು,
2ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು,
3ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ,
4ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು,
5ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು,
6ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು.
7ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು,
8ಯೆಹೋವನು ದಯೆಯು, ಕನಿಕರವು ಉಳ್ಳವನು,
9ಯೆಹೋವನು ಸರ್ವೋಪಕಾರಿಯು,
10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು,
11ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು,
12ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ,
13ನಿನ್ನ ರಾಜ್ಯವು ಶಾಶ್ವತವಾಗಿದೆ,
14ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ,
15ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ,
16ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
17ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು,
18ಯೆಹೋವನಿಗೆ ಮೊರೆಯಿಡುವವರು,
19ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ,
20ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ,
21ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು,