1ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ;
2ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ;
3ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ;
4ಯೆಹೋವನ ವಚನವು ಯಥಾರ್ಥವಾದದ್ದು;
5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು;
6ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು;
7ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ;
8ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ;
9ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು;
10ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ;
11ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು;
12ಯಾರಿಗೆ ಯೆಹೋವನೇ ದೇವರಾಗಿದ್ದಾನೋ,
13ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
14ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
15ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ,
16ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ;
17ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ;
18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ;
19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು;
20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ;
21ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು;
22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ;