We Believe JesusFé, Esperança e Nova Vida

ಕೀರ್ತ 55

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 54 ಕೀರ್ತ ಕೀರ್ತ 56 →

1ದೇವರೇ, ನನ್ನ ಮೊರೆಯನ್ನು ಲಾಲಿಸು;

2ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.

3ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ,

4ನನ್ನ ಹೃದಯವು ನೊಂದು ಬೆಂದುಹೋಗಿದೆ;

5ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.

6ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.

7ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,

8ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ

9ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು.

10ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು;

11ಅದರೊಳಗೆಲ್ಲಾ ನಾಶನವೇ;

12ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು;

13ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.

14ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ

15ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ.

16ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು;

17ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು.

18ನನ್ನ ವಿರೋಧಿಗಳು ಅನೇಕರಿದ್ದರೂ

19ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು

20ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ

21ಅವನ ಮಾತು ಬೆಣ್ಣೆಯಂತೆ ನುಣುಪು;

22ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;

23ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ.

← ಕೀರ್ತ 54 ಕೀರ್ತ ಕೀರ್ತ 56 →

ಕೀರ್ತ 55 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ