1ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ;
2ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು;
3ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು;
4ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ,
5ಕರ್ತನಾದ ಯೆಹೋವನೇ,
6ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.
7ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ;
8ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ;
9ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ;
10ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
11“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ;
12ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
13ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ;
14ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು;
15ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು;
16ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ
17ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ.
18ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ;
19ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ.
20ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು;
21ನನ್ನ ಗೌರವವನ್ನು ಹೆಚ್ಚಿಸು;
22ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು;
23ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ
24ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ.