1ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.
2ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.
3ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು
4ಅವರ ಮರಣವು ನಿರ್ಬಾಧಕವಾಗಿದೆ;
5ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ;
6ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ;
7ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ;
8ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ;
9ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ.
10ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ;
11ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.
12ನೋಡಿರಿ, ದುಷ್ಟರು ಇಂಥವರೇ;
13ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ,
14ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು,
15ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ,
16ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ
17ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
18ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು,
19ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ;
20ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ
21ನನ್ನ ಮನಸ್ಸು ನೊಂದುಹೋಗಿತ್ತು;
22ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ,
23ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ.
24ನಿನ್ನ ಚಿತ್ತವನ್ನು ತಿಳಿಯಪಡಿಸಿ,
25ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ?
26ತನುಮನಗಳು ಕ್ಷಯಿಸಿದರೂ
27ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು;
28ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು.