1ಐಶ್ವರ್ಯವಂತರೇ, 5:1 ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9:ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
25:2 ಮತ್ತಾ 6:19, 20:ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. 5:3 ಯಾಕೋಬ 5:8, 9:ಅಂತ್ಯಕಾಲ ಬಂದರೂ ಸಂಪತ್ತನ್ನು 5:3 ಮತ್ತಾ 6:19; ಲೂಕ 12:21; ರೋಮಾ. 2:5:ಕೂಡಿಸಿ ಇಟ್ಟುಕೊಂಡಿದ್ದೀರಿ.
4ಇಗೋ, 5:4 ಯಾಜ 19:13:ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು5:4 ಧರ್ಮೋ 24:15: ಪೈರು ಕೊಯ್ದದವರ ಕೂಗು 5:4 ರೋಮಾ. 9:29:ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
5ಭೂಲೋಕದಲ್ಲಿ ನೀವು 5:5 ಲೂಕ 16:19:ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
6ನೀವು ನೀತಿವಂತನನ್ನು ಖಂಡಿಸಿ 5:6 ಯಾಕೋಬ 4:2:ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.
7ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು 5:7 ಧರ್ಮೋ 11:14:ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
8ನೀವೂ ತಾಳ್ಮೆಯಿಂದಿರಿ, 5:8 1 ಥೆಸ. 3:13:ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ 5:8 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37:ಕರ್ತನ ಬರೋಣವು ಹತ್ತಿರವಾಯಿತು.
9ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ 5:9 ಮತ್ತಾ 7:1:ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, 5:9 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12:ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
10ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ 5:10 ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32,38.ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು 5:11 ಯೋಬ. 1:21, 22; 2:10:ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ 5:11 ಯೋಬ. 42:10, 12:ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ 5:11 ವಿಮೋ 34:6:ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
12ಮುಖ್ಯವಾಗಿ ನನ್ನ ಸಹೋದರರೇ, 5:12 ಮತ್ತಾ 5:34:ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, 5:13 ಕೊಲೊ 3:16:ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
14ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ 5:14 ಮಾರ್ಕ 6:13; ಮಾರ್ಕ 16:18:ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
15ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ 5:15 ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20:ಪಾಪಗಳನ್ನು ಕ್ಷಮಿಸುವನು.
16ಹೀಗಿರಲು ನೀವು ಸ್ವಸ್ಥವಾಗಬೇಕಾದರೆ 5:16 ಅ. ಕೃ. 19:18:ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. 5:16 ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29:ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
17ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, 5:17 1 ಅರಸು. 17:1; 18:1:ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು 5:17 ಲೂಕ 4:25:ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
19ನನ್ನ ಸಹೋದರರೇ, 5:19 ಮತ್ತಾ 18:15; ಗಲಾ. 6:1:ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ 5:19 ದಾನಿ. 12:3; ಮಲಾ. 2:6:ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
20ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ 5:20 ರೋಮಾ. 11:14:ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.