We Believe JesusFé, Esperança e Nova Vida

ಹಬ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

ಹಬ ಹಬ 2 →

1ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.

2ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ?

3ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ?

4ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ;

5ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ;

6ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ1:6 ಕಸ್ದೀಯ ಅಥವಾ ಬಾಬೆಲ್. ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ;

7ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.

8ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ;

9ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು.

10ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು.

11ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.

12ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ.

13ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ.

14ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?

15ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?

16ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ;

17ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

ಹಬ ಹಬ 2 →

ಹಬ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ