1ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು.
2ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು,
3ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು.
4ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
5ಅಲ್ಲದೆ ಮದ್ಯಪಾನವು2:5 ಮದ್ಯಪಾನವು ದ್ರಾಕ್ಷಾರಸವು ಅಥವಾ ಐಶ್ವರ್ಯ. ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು,
6“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು.
7ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.
8ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ,
9‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು,
10ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ.
11ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’
12‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ!
13ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.
14ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
15‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ,
16ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು,
17ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು;
18ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು;
19‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ?
20ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”