We Believe JesusFé, Esperança e Nova Vida

ಹಬ 3

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಹಬ 2 ಹಬ

1ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ.

2ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ;

3ತೇಮಾನಿನಿಂದ3:3 ತೇಮಾನಿನಿಂದ ತೇಮಾನ್ ಎದೋಮ್ ದೇಶದ ಜಿಲ್ಲೆಯಾಗಿದ್ದು, ಯೆಹೂದದ ದಕ್ಷಿಣ ಭಾಗದ ಕಡೆಯಲ್ಲಿತ್ತು. ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ3:3 ಪಾರಾನ್ ಪರ್ವತದಿಂದ ಪಾರಾನ್ ಪರ್ವತವು ಬಂಜರು/ಬರಡು ಸ್ಥಳವಾಗಿತ್ತು, ಅದು ಸೀನಾಯಿ ಗಡಿಪ್ರದೇಶ/ಭೂಪ್ರದೇಶದಲ್ಲಿ ಇತ್ತು. ಬರುತ್ತಾನೆ; ಸೆಲಾ.

4ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.

5ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ.

6ಆತನು ನಿಂತುಕೊಳ್ಳಲು ಭೂಮಿಯು ಅಳೆದನು.3:6 ಅಳೆದನು. ಕಂಪಿಸುವಂತೆ ಮಾಡಿದನು ಅಥವಾ ಅಲುಗಾಡಿಸಿದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ;

7ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.

8ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ?

9ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ. ಆಹಾ, ನಿನ್ನ ತೋಳ್ಬಲದಿಂದ ಪ್ರಯೋಗಿಸಿದ ಬಾಣಗಳ ಬಲವು ಜೀವಬುಗ್ಗೆಯನ್ನು ಭೂಮಿಯೊಳಗಿನಿಂದ ಹರಿದು ಬರುವಂತೆ ಮಾಡಿತು. ಸೆಲಾ.

10ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ;

11ಹಾರಿ ಬರುವ ನಿನ್ನ ಬಾಣಗಳ ಬೆಳಕಿಗೆ,

12ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ.

13ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ;

14ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು

15ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ.

16ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು.

17ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ,

18ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.

19ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ,

← ಹಬ 2 ಹಬ

ಹಬ 3 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ