1ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ;
2ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ.
3“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ.
4ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ;
5ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು.
6ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು.
7ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.
8ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು.
9ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ;
10ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು;
11ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ;
12ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ,
13ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ
14ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು.
15ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು;