1ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು,
2ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ,
3ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ,
4ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ;
5ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.
6ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು;13:6 ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ನಾನು ಅವರನ್ನು ಪೋಷಿಸಿದಾಗ ಅವರು ತೃಪ್ತರಾದರು.
7ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.
8ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು;
9ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು13:9 ಯಾರು ನಿನ್ನ ಸಹಾಯವು ನನ್ನೊಂದಿಗೆ ಮಾತ್ರವಿದೆ. ನಿನ್ನನ್ನು ರಕ್ಷಿಸುವರು?13:9 ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದುದರಿಂದ ನಾಶವಾಗಿದ್ದಿ.
10ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ?
11ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ;
12ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.
13ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ;
14ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ?
15ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ,
16ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು;