1ನಿಮ್ಮ ಸಹೋದರರನ್ನು “ಅಮ್ಮಿ2:1 ಅಮ್ಮಿ ನನ್ನ ಪ್ರಜೆ. ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ2:1 ರುಹಾಮ ವಾತ್ಸಲ್ಯವನ್ನು ತೋರಿಸಿದ್ದವು.” ಎಂದು ಕರೆಯಿರಿ.
2“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ.
3ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ,
4ಅವಳ ಮಕ್ಕಳನ್ನೂ ಕರುಣಿಸುವುದಿಲ್ಲ, ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳಲ್ಲವೇ.
5ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ.
6ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು,
7ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ.
8ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ,
9ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು,
10ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.
11ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
12ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ,
13ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು,
14“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.
15ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು.
16ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ2:16 ಬಾಳೀ ನನ್ನ ಯಜಮಾನನೇ.’ ಅನ್ನದೆ ‘ಈಶೀ2:16 ಈಶೀ ನನ್ನ ಗಂಡನೇ ಅಥವಾ ಎನ್ನಿನಿಯನೇ.’ ಅನ್ನುವಿ.
17ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.
18ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ,
19ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು;
20ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”
21ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು.
22ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು,
23ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು,