1ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ;
2ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು.
3ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ;
4ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ;
5ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ;
6ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು;
7ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ;
8ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!
9ದಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವುದು;
10ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ;
11ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ,
12ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.
13ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು;
14ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು;
15ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ,