1ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ.
2ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ;
3ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು.
4ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು,
5ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?
6ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು;
7ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ.
8ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ;
9ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ.
10ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು;
11ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
12ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ,
13ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ;
14ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ?
15ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ;
16ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ.
17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ;