We Believe JesusFé, Esperança e Nova Vida

1 ಕೊರಿಂಥದವರಿಗೆ 2

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← 1 ಕೊರಿಂಥದವರಿಗೆ 1 1 ಕೊರಿಂಥದವರಿಗೆ 1 ಕೊರಿಂಥದವರಿಗೆ 3 →

1ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.

2ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.

3ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.

4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.

5ನಿಮ್ಮ ನಂಬಿಕೆಯು ಮನುಷ್ಯ ಜ್ಞಾನದ ಮೇಲೆ ಅವಲಂಬಿಸದೆ ದೇವರ ಶಕ್ತಿಯ ಮೇಲೆ ಅವಲಂಬಿಸಬೇಕೆಂದು ನಾನು ಹೀಗೆ ಮಾಡಿದೆನು.

6ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.

7ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.

8ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.

9ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ:

10ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ.

11ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.

12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.

13ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.

14ಆದರೆ ಭೌತಿಕ ಮನುಷ್ಯನು2:14 ಪೌಲನು ಮನುಷ್ಯರನ್ನು ಮೂರು ವ್ಯಕ್ತಿಗಳಾಗಿ ವಿಂಗಡಿಸಿದ್ದಾನೆ. ಮೊದಲನೆಯದಾಗಿ ತಮ್ಮ ಮನಸ್ಸಿನ ಭಾವನೆಗಳ ಬದುಕುವವರು ಮತ್ತು ದೇವರ ಆತ್ಮ ಇಲ್ಲದವರು. ಎರಡನೆಯದಾಗಿ ದೈಹಿಕ ಆಸೆಗಳನ್ನು ಅನುಸರಿಸುವವರು ದೈಹಿಕರು. ಮೂರನೆಯದಾಗಿ ಪವಿತ್ರಾತ್ಮ ದೇವರನ್ನು ಅನುಸರಿಸುವವರು ಆತ್ಮಿಕರು. ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.

15ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.

16ಏಕೆಂದರೆ,

← 1 ಕೊರಿಂಥದವರಿಗೆ 1 1 ಕೊರಿಂಥದವರಿಗೆ 1 ಕೊರಿಂಥದವರಿಗೆ 3 →

1 ಕೊರಿಂಥದವರಿಗೆ 2 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019