We Believe JesusFé, Esperança e Nova Vida

1 ಪೂರ್ವಕಾಲ ವೃತ್ತಾಂತ 16

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← 1 ಪೂರ್ವಕಾಲ ವೃತ್ತಾಂತ 15 1 ಪೂರ್ವಕಾಲ ವೃತ್ತಾಂತ 1 ಪೂರ್ವಕಾಲ ವೃತ್ತಾಂತ 17 →

1ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

2ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,

3ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು.

4ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.

5ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.

6ಇದಲ್ಲದೆ ಯಾಜಕರಾದ ಬೆನಾಯನೂ, ಯಹಜಿಯೇಲನೂ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.

7ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:

8ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ,

9ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ,

10ದೇವರ ಪರಿಶುದ್ಧ ನಾಮವನ್ನು ಹೊಗಳಿರಿ,

11ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,

12ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ,

13ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ,

14ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ.

15ದೇವರು ತಮ್ಮ ಒಡಂಬಡಿಕೆಯನ್ನೂ,

16ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ,

17ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು,

18“ನಾನು ನಿಮಗೆ ಕಾನಾನ್ ದೇಶವನ್ನು

19ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ,

20ಅವರು ಜನಾಂಗದಿಂದ ಜನಾಂಗಕ್ಕೂ,

21ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು.

22ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ.

23ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ.

24ಜನಾಂಗಗಳಲ್ಲಿ ಅವರ ಘನತೆಯನ್ನೂ,

25ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ;

26ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ;

27ಅವರ ಸನ್ನಿಧಿಯಲ್ಲಿ ಘನತೆಯೂ ಪ್ರಭೆಯೂ;

28ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ,

29ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ;

30ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.

31ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.

32ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.

33ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ

34ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.

35ನಮ್ಮ ರಕ್ಷಣೆಯ ದೇವರೇ,

36ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ

37ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು.

38ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.

39ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.

40ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.

41“ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು.

42ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.

43ತರುವಾಯ ಜನರೆಲ್ಲರು ತಮ್ಮ ತಮ್ಮ ಮನೆಗೆ ಹೋದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸುವುದಕ್ಕೆ ಹೋದನು.

← 1 ಪೂರ್ವಕಾಲ ವೃತ್ತಾಂತ 15 1 ಪೂರ್ವಕಾಲ ವೃತ್ತಾಂತ 1 ಪೂರ್ವಕಾಲ ವೃತ್ತಾಂತ 17 →

1 ಪೂರ್ವಕಾಲ ವೃತ್ತಾಂತ 16 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019