1ಇಸ್ರಾಯೇಲರು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು. ಹೇಗೆಂದರೆ, ಕುಟುಂಬಗಳ ಮುಖ್ಯಸ್ಥರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಅಧಿಪತಿಗಳೂ ವರ್ಷದ ಎಲ್ಲಾ ತಿಂಗಳುಗಳಲ್ಲಿ ಪ್ರತಿ ತಿಂಗಳು ಸರತಿಯಂತೆ ಬರುತ್ತಿದ್ದ ವರ್ಗಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿವರ್ಗದಲ್ಲಿ 24,000 ಮಂದಿಯಿದ್ದರು.
2ಮೊದಲನೆಯ ತಿಂಗಳಿಗೋಸ್ಕರ ಮೊದಲನೆಯ ವರ್ಗದ ಮೇಲೆ ಜಬ್ದಿಯೇಲನ ಮಗ ಯಾಷೊಬ್ಬಾಮನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
3ಮೊದಲನೆಯ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಪ್ರಧಾನನಾದವನು ಪೆರೆಚನ ಮಕ್ಕಳಲ್ಲಿ ಒಬ್ಬನಾಗಿದ್ದನು.
4ಎರಡನೆಯ ತಿಂಗಳಿನ ವರ್ಗದ ಮೇಲೆ ಅಹೋಹ್ಯನಾದ ದೊದಾಯಿಯು. ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು. ಅವನ ವರ್ಗದಲ್ಲಿ 24,000 ಜನರಿದ್ದರು.
5ಮೂರನೆಯ ತಿಂಗಳಿನ ಸೈನ್ಯದ ಮೂರನೆಯ ಅಧಿಪತಿಯು, ಯಾಜಕನಾಗಿರುವ ಯೆಹೋಯಾದಾವನ ಮಗ ಬೆನಾಯನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
6ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು. ಅವನ ವರ್ಗದಲ್ಲಿ ಅವನ ಮಗ ಅಮ್ಮೀಜಾಬಾದನು ಇದ್ದನು.
7ನಾಲ್ಕನೆಯ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋದರನಾದ ಅಸಾಯೇಲನು; ಅವನ ತರುವಾಯ ಅವನ ಮಗ ಜೆಬದ್ಯನು; ಅವನ ವರ್ಗದಲ್ಲಿ 24,000 ಜನರು.
8ಐದನೆಯ ತಿಂಗಳಿನ ಐದನೆಯ ಅಧಿಪತಿಯು ಇಜ್ರಾಹನಾದ ಶಮ್ಹೂತನು; ಅವನ ವರ್ಗದಲ್ಲಿ 24,000 ಜನರು.
9ಆರನೆಯ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗ ಈರನು; ಅವನ ವರ್ಗದಲ್ಲಿ 24,000 ಜನರು.
10ಏಳನೆಯ ತಿಂಗಳಿನ ಏಳನೆಯವನು ಎಫ್ರಾಯೀಮನ ಮಕ್ಕಳಲ್ಲಿ ಒಬ್ಬನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗದಲ್ಲಿ 24,000 ಜನರು.
11ಎಂಟನೆಯ ತಿಂಗಳಿನ ಎಂಟನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ಹುಷಾತ್ಯನಾದ ಸಿಬ್ಬೆಕೈ; ಅವನ ವರ್ಗದಲ್ಲಿ 24,000 ಜನರು.
12ಒಂಬತ್ತನೆಯ ತಿಂಗಳಿನ ಒಂಬತ್ತನೆಯವನು ಬೆನ್ಯಾಮೀನ್ಯರಲ್ಲಿ ಒಬ್ಬನಾಗಿರುವ ಅನಾತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ 24,000 ಜನರು.
13ಹತ್ತನೆಯ ತಿಂಗಳಿನ ಹತ್ತನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು ಅವನ ವರ್ಗದಲ್ಲಿ 24,000 ಜನರು.
14ಹನ್ನೊಂದನೆಯ ತಿಂಗಳಿನ ಹನ್ನೊಂದನೆಯವನು ಎಫ್ರಾಯೀಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರಾತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ 24,000 ಜನರು.
15ಹನ್ನೆರಡನೆಯ ತಿಂಗಳಿನ ಹನ್ನೆರಡನೆಯವನು ಒತ್ನಿಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದಾಯಿಯು; ಅವನ ವರ್ಗದಲ್ಲಿ 24,000 ಜನರು.
16ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ಅಧಿಕಾರಿಗಳು ಯಾರೆಂದರೆ:
17ಲೇವಿಯರ ಮೇಲೆ ಕೆಮುವೇಲನ ಮಗ ಹಷಬ್ಯನು.
18ಯೆಹೂದನಿಗೆ ದಾವೀದನ ಸಹೋದರರಲ್ಲಿ ಒಬ್ಬನಾಗಿರುವ ಎಲೀಹುವು;
19ಜೆಬುಲೂನನಿಗೆ ಓಬದ್ಯನ ಮಗ ಇಷ್ಮಾಯನು
20ಎಫ್ರಾಯೀಮನ ಮಕ್ಕಳಲ್ಲಿ ಅಜಜ್ಯನ ಮಗ ಹೋಶೇಯನು;
21ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗ ಇದ್ದೋನು;
22ದಾನನ ಗೋತ್ರಕ್ಕೆ ಯೆರೋಹಾಮನ ಮಗ ಅಜರಯೇಲ್.
23ದಾವೀದನು ಇಪ್ಪತ್ತು ವರ್ಷಗಳೊಳಗೆ ಇದ್ದವರ ಲೆಕ್ಕ ತೆಗೆದುಕೊಳ್ಳಲಿಲ್ಲ. ಏಕೆಂದರೆ, “ಇಸ್ರಾಯೇಲನನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನು,” ಎಂದು ಯೆಹೋವ ದೇವರು ಹೇಳಿದ್ದರು.
24ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.
25ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು.
26ಹೊಲವನ್ನು ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗ ಎಜ್ರಿಯು ಇದ್ದನು.
27ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು.
28ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು.
29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು.
30ಒಂಟೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಇಷ್ಮಾಯೇಲನಾದ ಓಬೀಲ್.
31ಕುರಿ ಮಂದೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಹಗ್ರೀಯನಾದ ಯಾಜೀಜ್.
32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯು, ವಿವೇಕಿಯೂ ಆದ ಲೇಖಕನಾಗಿದ್ದನು.
33ಅರಸನ ಆಲೋಚನೆಗಾರನು ಅಹೀತೋಫೆಲ್;
34ಅಹೀತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ, ಅಬಿಯಾತರನೂ ಅರಸನ ಆಲೋಚನೆಗಾರರಾಗಿದ್ದರು.