1ಎಲೀಯನು ಮಾಡಿದ್ದೆಲ್ಲವನ್ನೂ, ಅವನು ಖಡ್ಗದಿಂದ ಎಲ್ಲಾ ಪ್ರವಾದಿಗಳನ್ನು ಕೊಂದು ಹಾಕಿದ್ದೆಲ್ಲವನ್ನೂ, ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
2ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.
3ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.
4ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.
5ಅವನು ಜಾಲೀಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು.
6ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.
7ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.
8ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.
9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು.
10ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.
11ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು.
12ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು.
13ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು.
14ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.
15ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು.
16ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.
17ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.
18ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.
19ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
20ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು.
21ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.