1ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ,
2ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.
3ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು.
4ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು.
5ದಾವೀದನು ತನಗೆ ವರ್ತಮಾನ ಹೇಳಿದ ಯುವಕನಿಗೆ, “ಸೌಲನೂ, ಅವನ ಮಗ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಪ್ರಶ್ನಿಸಿದನು.
6ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
7ಅವನು ಹಿಂದಕ್ಕೆ ತಿರುಗಿ ನೋಡಿ, ನನ್ನನ್ನು ಕಂಡು ಕರೆದನು. ಆಗ ನಾನು, ‘ಇದ್ದೇನೆ,’ ಎಂದೆನು.
8“ಆಗ ಅವನು, ‘ನೀನ್ಯಾರು?’ ಎಂದು ಕೇಳಿದನು.
9“ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು.
10“ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.
11ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,
12ಸೌಲನೂ, ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಯೆಹೋವ ದೇವರ ಜನರೂ ಖಡ್ಗದಿಂದ ಬಿದ್ದ ಕಾರಣ, ಅವರಿಗೋಸ್ಕರ ಗೋಳಾಡಿ ಅತ್ತು, ಅಸ್ತಮಾನದವರೆಗೂ ಉಪವಾಸವಾಗಿದ್ದರು.
13ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು.
14ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.
15ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು.
16ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.
17ಆಗ ದಾವೀದನು ಸೌಲನ ಮೇಲೆಯೂ, ಅವನ ಮಗ ಯೋನಾತಾನನ ಮೇಲೆಯೂ ಶೋಕದಿಂದ ಈ ಗೀತೆ ಹಾಡಿ ಗೋಳಾಡಿದನು.
18ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ:
19“ಇಸ್ರಾಯೇಲೇ, ನಿನ್ನ ಮಹಿಮೆಯು ನಿನ್ನ ಬೆಟ್ಟಗಳ ಮೇಲೆ ಕೊಲೆಯಾಗಿ ಬಿದ್ದಿದೆ.
20“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ.
21“ಗಿಲ್ಬೋವ ಬೆಟ್ಟಗಳೇ,
22“ಹತರಾದವರ ರಕ್ತದಿಂದಲೂ,
23ಸೌಲನೂ ಯೋನಾತಾನನೂ
24“ಇಸ್ರಾಯೇಲಿನ ಪುತ್ರಿಯರೇ,
25“ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ.
26ನನ್ನ ಸಹೋದರನಾದ ಯೋನಾತಾನನೇ,
27“ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ.