1ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.
2ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ, “ನೀನು ಚೀಬನೋ?” ಎಂದನು.
3ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು.
4“ಅವನು ಎಲ್ಲಿ ಇದ್ದಾನೆ?” ಎಂದು ಅರಸನು ಅವನನ್ನು ಕೇಳಿದನು.
5ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು.
6ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು.
7ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.
8ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು.
9ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.
10ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
11ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
12ಮೆಫೀಬೋಶೆತನಿಗೆ ಮೀಕನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾಗಿದ್ದ ಸಮಸ್ತರೂ ಮೆಫೀಬೋಶೆತನಿಗೆ ದಾಸರಾಗಿದ್ದರು.
13ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು.