1ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.
2ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,
3ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ:
4ಕರ್ತನೇ, ನಿನಗೆ ಭಯಪಡದವರೂ
5ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.
6ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
7ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.
8ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.