We Believe JesusFé, Esperança e Nova Vida

ಮತ್ತಾಯ 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

ಮತ್ತಾಯ ಮತ್ತಾಯ 2 →

1ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:

2ಅಬ್ರಹಾಮನು ಇಸಾಕನ ತಂದೆ,

3ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ,

4ಅರಾಮನು ಅಮ್ಮೀನಾದಾಬನ ತಂದೆ,

5ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು,

6ಇಷಯನು ರಾಜನಾದ ದಾವೀದನ ತಂದೆ.

7ಸೊಲೊಮೋನನು ರೆಹಬ್ಬಾಮನ ತಂದೆ,

8ಆಸನು ಯೆಹೋಷಾಫಾಟನ ತಂದೆ,

9ಉಜ್ಜೀಯನು ಯೋತಾಮನ ತಂದೆ,

10ಹಿಜ್ಕೀಯನು ಮನಸ್ಸೆಯ ತಂದೆ,

11ಯೋಷೀಯನಿಗೆ ಯೆಕೊನ್ಯ1:11 ಯೆಹೋಯಾಕೀನನು ಎಂದು ಸಹ ಕರೆಯಲಾಗುತ್ತಿತ್ತು. ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.

12ಬಾಬಿಲೋನಿಗೆ ಸೆರೆಹೋದ ಮೇಲೆ:

13ಜೆರುಬ್ಬಾಬೆಲನು ಅಬಿಹೂದನ ತಂದೆ,

14ಅಜೋರನು ಸದೋಕನ ತಂದೆ,

15ಎಲಿಹೂದನು ಎಲಿಯಾಜರನ ತಂದೆ,

16ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.

17ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.

18ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.

19ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.

20ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.

21ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು1:21 ಯೇಸು ಎಂಬುದು ಗ್ರೀಕ್ ರೂಪವಾದ ಯೆಹೋಶುವಾ ಇದರ ಅರ್ಥ ಯೆಹೋವ ದೇವರು ರಕ್ಷಿಸುವರು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.

22ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:

23“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’1:23 ಯೆಶಾಯ 7:14 ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.

24ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.

25ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.

ಮತ್ತಾಯ ಮತ್ತಾಯ 2 →

ಮತ್ತಾಯ 1 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019