1ದಾವೀದನ ಮಗನೂ ಯೆರೂಸಲೇಮಿನ ಅರಸನೂ ಆದ ಪ್ರಸಂಗಿಯ ಮಾತುಗಳು:
2“ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!”
3ಸೂರ್ಯನ ಕೆಳಗೆ ಮನುಷ್ಯನು ಪಡುವ
4ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ;
5ಸೂರ್ಯನು ಉದಯಿಸುತ್ತಾನೆ, ಸೂರ್ಯನು ಮುಳುಗುತ್ತಾನೆ.
6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ.
7ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ.
8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ.
9ಇದ್ದದ್ದೇ ಇರುವುದು,
10“ನೋಡು, ಇದು ಹೊಸದು,” ಎಂದು
11ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ.
12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರ ಮೇಲೆ ಅರಸನಾಗಿದ್ದೆ.
13ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.
14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.
15ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ.
16ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”
17ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.
18ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ,