We Believe JesusFé, Esperança e Nova Vida

ಪ್ರಸಂಗಿ 5

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಪ್ರಸಂಗಿ 4 ಪ್ರಸಂಗಿ ಪ್ರಸಂಗಿ 6 →

1ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.

2ನೀನು ದುಡುಕಿ ಮಾತನಾಡಬೇಡ,

3ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ.

4ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.

5ಹರಕೆಮಾಡಿ ತೀರಿಸದೆ ಇರುವುದಕ್ಕಿಂತ, ಹರಕೆ ಮಾಡದೆ ಇರುವುದು ಒಳ್ಳೆಯದು.

6ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?

7ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.

8ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.

9ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.

10ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು.

11ಸೊತ್ತು ಹೆಚ್ಚಿದರೆ,

12ಪ್ರಯಾಸ ಪಡುವವನು ಸ್ವಲ್ಪ ತಿಂದರೂ

13ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ:

14ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ.

15ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ,

16ಇದು ಕೂಡ ವ್ಯಸನಕರವಾದ ಕೇಡು:

17ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ.

18ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.

19ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.

20ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.

← ಪ್ರಸಂಗಿ 4 ಪ್ರಸಂಗಿ ಪ್ರಸಂಗಿ 6 →

ಪ್ರಸಂಗಿ 5 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019