We Believe JesusFé, Esperança e Nova Vida

ಪ್ರಸಂಗಿ 6

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಪ್ರಸಂಗಿ 5 ಪ್ರಸಂಗಿ ಪ್ರಸಂಗಿ 7 →

1ಸೂರ್ಯನ ಕೆಳಗೆ ಇರುವ ಇನ್ನೊಂದು ಕೇಡನ್ನು ಕಂಡೆನು, ಅದು ಮನುಷ್ಯರ ಮೇಲೆ ಬಹು ಭಾರವಾಗಿದೆ.

2ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.

3ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.

4ಆ ಕೂಸು ವ್ಯರ್ಥವಾಗಿ ಬಂದು ಕತ್ತಲೆಯಲ್ಲಿ ಹೊರಟು ಹೋಗುತ್ತದೆ. ಅದರ ಹೆಸರು ಅಂಧಕಾರದಿಂದ ಕವಿದಿರುವುದು.

5ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ.

6ಒಂದು ವೇಳೆ ಎರಡು ಸಾವಿರ ವರ್ಷಗಳು ಆ ಮನುಷ್ಯನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?

7ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ,

8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ?

9ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ

10ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ.

11ಮಾತು ಹೆಚ್ಚಿದಷ್ಟೂ,

12ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?

← ಪ್ರಸಂಗಿ 5 ಪ್ರಸಂಗಿ ಪ್ರಸಂಗಿ 7 →

ಪ್ರಸಂಗಿ 6 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019