1ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ.
2ನನ್ನ ಬೋಧನೆ ಮಳೆಯಂತೆ ಸುರಿಯುವುದು.
3ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ.
4ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು.
5ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು.
6ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ?
7ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ.
8ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ,
9ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ.
10ದೇವರು ಬರಿದಾದ ಮರುಭೂಮಿಯಲ್ಲಿ
11ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ,
12ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು.
13ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ,
14ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ,
15ಯೆಶುರೂನು32:15 ಯೆಶುರೂನ ಎಂದರೆ ಯಥಾರ್ಥವಂತ ಅಥವಾ ಇಸ್ರಾಯೇಲನ್ನು ಉಲ್ಲೇಖಿಸುವ ಪ್ರೀತಿಯ ಪದವಾಗಿದೆ ಎಂಬ ಇಸ್ರಾಯೇಲರು ಕೊಬ್ಬಿ ಹೋದರು.
16ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು.
17ದೇವರಿಗೆ ಅಲ್ಲ, ದೆವ್ವಗಳಿಗೆ,
18ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ,
19ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ
20ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು,
21ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು.
22ಏಕೆಂದರೆ ನನ್ನ ರೋಷ ಬೆಂಕಿಯಂತಿದೆ,
23“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು.
24ಅವರು ಹಸಿವೆಯಿಂದ ಬಳಲಿ ಹೋಗುವರು,
25ಮನೆಯ ಹೊರಗೆ ಖಡ್ಗವೂ
26ನಾನು ಅವರನ್ನು ಚದರಿಸಿಬಿಡುವೆನು.
27ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು,
28ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ.
29ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು,
30ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ,
31ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ.
32ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ,
33ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ,
34“ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ?
35ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ.
36ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು.
37ಆಗ ಯೆಹೋವ ದೇವರು ಹೀಗನ್ನುವರು:
38ಅವರ ಬಲಿಗಳ ಕೊಬ್ಬನ್ನು ತಿಂದಂಥ,
39“ನಾನು ಇರುವಾತನೇ ಆಗಿದ್ದೇನೆ!
40ಆಕಾಶದ ಕಡೆ ನನ್ನ ಕೈಯೆತ್ತಿ,
41ನಾನು ಮಿಂಚುವ ಖಡ್ಗವನ್ನು ಹದಮಾಡಿ,
42ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ,
43ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ.
44ಆಗ ಮೋಶೆಯು ನೂನನ ಮಗನಾದ ಹೋಶೇಯನ32:44 ಹೋಶೇಯ ಹೀಬ್ರೂ ಭಾಷೆಯಲ್ಲಿ ಯೆಹೋಶುವ ಎಂದು ಕರೆಯಲಾಗಿದೆ ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
45ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ,
46“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.
47ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.
48ಆ ದಿವಸವೇ ಯೆಹೋವ ದೇವರು ಮೋಶೆಗೆ,
49“ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.
50ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು.
51ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.
52ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.