We Believe JesusFé, Esperança e Nova Vida

ವಿಮೋಚನಕಾಂಡ 15

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ವಿಮೋಚನಕಾಂಡ 14 ವಿಮೋಚನಕಾಂಡ ವಿಮೋಚನಕಾಂಡ 16 →

1ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು:

2“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ;

3ಯೆಹೋವ ದೇವರು ಯುದ್ಧವೀರರು;

4ಅವರು ಫರೋಹನ ರಥಗಳನ್ನೂ,

5ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು.

6ಯೆಹೋವ ದೇವರೇ, ನಿಮ್ಮ ಬಲಗೈ

7“ನಿಮ್ಮ ಮಹತ್ತಾದ ಘನತೆಯಲ್ಲಿ

8ನೀವು ಬೀಸಿದ ಬಿರುಸಾದ ಗಾಳಿಯಿಂದ

9ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು,

10ನೀವು ನಿಮ್ಮ ಶ್ವಾಸ ಊದಿದಾಗ

11ಯೆಹೋವ ದೇವರೇ,

12“ನೀವು ನಿಮ್ಮ ಬಲಗೈಯನ್ನು ಚಾಚಲು

13ನೀವು ವಿಮೋಚಿಸಿದ ಜನರನ್ನು

14ಜನರು ಇದನ್ನು ಕೇಳಿದಾಗ ಭಯಪಡುವರು.

15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು;

16ಭಯವೂ ಹೆದರಿಕೆಯೂ ಅವರಿಗಾಗುವುದು;

17ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ,

18“ಯೆಹೋವ ದೇವರು

19ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.

20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.

21ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು:

22ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.

23ಅವರು ಮಾರಾ ಎಂಬಲ್ಲಿಗೆ ಬಂದ ಮೇಲೆ ಅಲ್ಲಿಯ ನೀರನ್ನು ಕುಡಿಯಲಾರದೆ ಇದ್ದರು; ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು “ಮಾರಾ” ಎಂದು ಕರೆಯಲಾಯಿತು.

24ಆದ್ದರಿಂದ ಜನರು, “ನಾವು ಏನು ಕುಡಿಯೋಣ?” ಎಂದು ಹೇಳಿ, ಮೋಶೆಗೆ ವಿರೋಧವಾಗಿ ಗೊಣಗುಟ್ಟಿದರು.

25ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು.

26ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.

27ತರುವಾಯ ಇಸ್ರಾಯೇಲರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅವರು ಆ ನೀರಿನ ಬಳಿಯಲ್ಲಿ ಇಳಿದುಕೊಂಡರು.

← ವಿಮೋಚನಕಾಂಡ 14 ವಿಮೋಚನಕಾಂಡ ವಿಮೋಚನಕಾಂಡ 16 →

ವಿಮೋಚನಕಾಂಡ 15 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019