We Believe JesusFé, Esperança e Nova Vida

ವಿಮೋಚನಕಾಂಡ 6

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ವಿಮೋಚನಕಾಂಡ 5 ವಿಮೋಚನಕಾಂಡ ವಿಮೋಚನಕಾಂಡ 7 →

1ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.

2ಇದಲ್ಲದೆ ದೇವರು ಮೋಶೆಯ ಸಂಗಡ ಮಾತನಾಡಿ, “ನಾನೇ ಯೆಹೋವ ದೇವರು.

3ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.

4ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.

5ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.

6“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.

7ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.

8ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.

9ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.

10ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

11“ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು.

12ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.

13ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು.

14ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ:

15ಸಿಮೆಯೋನನ ಪುತ್ರರು:

16ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು:

17ಗೇರ್ಷೋನನ ಪುತ್ರರು ಅವರ ಗೋತ್ರಗಳಿಗನುಸಾರವಾಗಿ:

18ಕೊಹಾತನ ಪುತ್ರರು:

19ಮೆರಾರೀಯ ಪುತ್ರರು:

20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು.

21ಇಚ್ಹಾರನ ಪುತ್ರರು:

22ಉಜ್ಜೀಯೇಲನ ಪುತ್ರರು:

23ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.

24ಕೋರಹನ ಪುತ್ರರು:

25ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು.

26ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.

27ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.

28ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದರು.

29ಅವರು ಮೋಶೆಗೆ, “ನಾನೇ ಯೆಹೋವ ದೇವರು. ನಾನು ನಿನಗೆ ಹೇಳುವುದನ್ನೆಲ್ಲಾ ಈಜಿಪ್ಟಿನ ಅರಸನಾದ ಫರೋಹನಿಗೆ ತಿಳಿಸು,” ಎಂದರು.

30ಅದಕ್ಕೆ ಮೋಶೆಯು ಯೆಹೋವ ದೇವರ ಮುಂದೆ, “ಇಗೋ, ನಾನು ತೊದಲು ಮಾತನಾಡುವವನು. ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.

← ವಿಮೋಚನಕಾಂಡ 5 ವಿಮೋಚನಕಾಂಡ ವಿಮೋಚನಕಾಂಡ 7 →

ವಿಮೋಚನಕಾಂಡ 6 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019