1ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
2“ಯಾಕೋಬನ ಪುತ್ರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ,
3“ರೂಬೇನನೇ, ನೀನು ನನ್ನ ಜೇಷ್ಠಪುತ್ರನು.
4ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ.
5“ಸಿಮೆಯೋನನೂ ಲೇವಿಯೂ ಸಹೋದರರು
6ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ.
7ಅವರ ಕೋಪವು ಭಯಂಕರವಾಗಿಯೂ
8“ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು.
9ಯೆಹೂದನು ಸಿಂಹದ ಮರಿಯಾಗಿದ್ದಾನೆ.
10ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ,
11ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು.
12ದ್ರಾಕ್ಷಾರಸದಿಂದ ಅವನ ಕಣ್ಣುಗಳು ಕೆಂಪಾಗಿರುವವು,
13“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು,
14“ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ
15ವಿಶ್ರಾಂತಿಯು ಒಳ್ಳೆಯದೆಂದೂ
16“ದಾನನು ಇಸ್ರಾಯೇಲನ ಗೋತ್ರಗಳಲ್ಲಿ ಒಂದು ಗೋತ್ರವಾಗಿ
17ದಾನನು ಮಾರ್ಗದಲ್ಲಿರುವ ಸರ್ಪವೂ
18“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.
19“ಗಾದನ ಮೇಲೆ ಸೈನ್ಯವು ದಾಳಿಮಾಡುವುದು,
20“ಆಶೇರನ ಆಹಾರವು ಕೊಬ್ಬಿದ ಆಹಾರವು.
21“ನಫ್ತಾಲಿ ಬಿಡುಗಡೆ ಹೊಂದಿದ ಜಿಂಕೆ,
22“ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ
23ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು.
24ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು.
25ಇದಕ್ಕೆ ಕಾರಣ ನಿನಗೆ ಸಹಾಯ ಮಾಡುವ ನಿನ್ನ ಪಿತೃಗಳ ದೇವರು;
26ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ
27“ಬೆನ್ಯಾಮೀನನು ಕ್ರೂರವಾದ ತೋಳದಂತಿದ್ದಾನೆ.
28ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
29ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ
30ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲದಲ್ಲಿರುವಂಥ ಅಬ್ರಹಾಮನು, ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಳಿರಿ.
31ಅಲ್ಲಿ ಅಬ್ರಹಾಮನನ್ನೂ, ಅವನ ಹೆಂಡತಿ ಸಾರಳನ್ನೂ ಹೂಳಿದರು. ಅಲ್ಲಿ ಇಸಾಕನನ್ನೂ, ಅವನ ಹೆಂಡತಿ ರೆಬೆಕ್ಕಳನ್ನೂ ಹೂಳಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಳಿದೆನು.
32ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಕೊಂಡುಕೊಂಡದ್ದು,” ಎಂದನು.
33ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.