We Believe JesusFé, Esperança e Nova Vida

ಯೆಶಾಯ 38

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 37 ಯೆಶಾಯ ಯೆಶಾಯ 39 →

1ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.

2ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.

3“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.

4ಆಗ ಯೆಹೋವ ದೇವರ ವಾಕ್ಯವು ಯೆಶಾಯನಿಗೆ ಬಂದಿತು,

5“ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.

6ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು.

7“ ‘ಯೆಹೋವ ದೇವರು ತಾವು ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ.

8ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.

9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣಹೊಂದಿದ ನಂತರ ಬರೆದದ್ದು:

10“ನನ್ನ ಜೀವನದ ಮಧ್ಯಪ್ರಾಯದಲ್ಲೇ

11ನಾನು ಹೀಗೆ ಯೋಚಿಸಿದೆ, “ಯೆಹೋವ ದೇವರನ್ನು ಜೀವಿತರ

12ನನ್ನ ಆಶ್ರಯವು ಕುರುಬನ ಗುಡಾರದಂತೆ

13ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ,

14ನಾನು ಬಾನಕ್ಕಿಯಂತೆಯೂ,

15ಆದರೆ, ನಾನು ಏನು ಹೇಳಲಿ,

16ಕರ್ತದೇವರೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ.

17ಆ ಬಹು ವ್ಯಥೆಯು ನನ್ನ

18ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ.

19ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು.

20ಯೆಹೋವ ದೇವರು ನನ್ನನ್ನು ರಕ್ಷಿಸುವರು.

21“ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ, ಹುಣ್ಣಿನ ಮೇಲೆ ಇಟ್ಟರೆ, ಅವನು ಗುಣಹೊಂದುವನು,” ಎಂದು ಯೆಶಾಯನು ಹೇಳಿದನು.

22ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.

← ಯೆಶಾಯ 37 ಯೆಶಾಯ ಯೆಶಾಯ 39 →

ಯೆಶಾಯ 38 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019