We Believe JesusFé, Esperança e Nova Vida

ಯೆಶಾಯ 4

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 3 ಯೆಶಾಯ ಯೆಶಾಯ 5 →

1ಆ ದಿವಸದಲ್ಲಿ ಏಳುಮಂದಿ ಹೆಂಗಸರು

2ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.

3ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.

4ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.

5ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.

6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.

← ಯೆಶಾಯ 3 ಯೆಶಾಯ ಯೆಶಾಯ 5 →

ಯೆಶಾಯ 4 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019