We Believe JesusFé, Esperança e Nova Vida

ಯೆಶಾಯ 6

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 5 ಯೆಶಾಯ ಯೆಶಾಯ 7 →

1ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

2ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.

3ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ,

4ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.

5ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.

6ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,

7ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.

8ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ,

9ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ:

10ತಮ್ಮ ಕಣ್ಣುಗಳಿಂದ ನೋಡದಂತೆಯೂ,

11ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು.

12ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ,

13ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ,

← ಯೆಶಾಯ 5 ಯೆಶಾಯ ಯೆಶಾಯ 7 →

ಯೆಶಾಯ 6 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019